---Advertisement---

2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆ – 2024-25 Karnataka Govt Degree Collage Guest Faculty

Updated On:

Degree Collage Guest Lecturer
---Advertisement---

ಪರಿಷ್ಕರಿಸಲಾದ ಹೊಸ ತಾತ್ಕಾಲಿಕ ವೇಳಾಪಟ್ಟಿ 

2024-25ನೇ ಶೈಕ್ಷಣಿಕ ಸಾಲಿನಲ್ಲಿ  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಅತಿಥಿ ಉಪನ್ಯಾಸಕರನ್ನು  ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳಲು ಪ್ರಾರಂಭಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕರ್ನಾಟಕ ಸರಕಾರ ಆಯ್ಕೆ ಮಾಡಿಕೊಳ್ಳುತ್ತಿದ್ದು  ಈ ಕುರಿತು ನಿಮಗೆ ಅವಶ್ಯವಿರುವಂತಹ ಎಲ್ಲ ಮಾಹಿತಿಯನ್ನು ನಿಮಗೆ ನೀಡಲು ಪ್ರಯತ್ನಿಸುತ್ತೇವೆ. ಇದರ ಕೆಳಗೆ ಅರ್ಜಿಸಲ್ಲಿಸುವ ಲಿಂಕನ್ನು ನೀಡಲಾಗಿದೆ. ಹಾಗೂ ಪೂರ್ಣ ಮಾಹಿತಿಯನ್ನೊಳಗೊಂಡ Notification Link ನ್ನು ನೀಡಲಾಗಿದೆ.

  • ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 01 ವಿಷಯಕ್ಕೆ ಒಂದೇ ಅರ್ಜಿಯನ್ನು ಮಾತ್ರ ಸಲ್ಲಿಸುವುದು. ಒಂದೇ ವಿಷಯಕ್ಕೆ ಒಂದಕ್ಕಿಂತ ಹೆಚ್ಚಿನ ಅರ್ಜಿಗಳನ್ನು  ಅಂದರೆ 2 , 3 , 4 ಅಥವಾ ಅದಕ್ಕಿಂತ ಹೆಚ್ಚಿಗೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

ಮೊದಲಿನ (ಈ ಹಿಂದಿನ)ತಾತ್ಕಾಲಿಕ ವೇಳಾಪಟ್ಟಿಯ ಮಾಹಿತಿ

ಕ್ರ. ಸಂ ಮಾಹಿತಿಯ ವಿವರ ದಿನಾಂಕ
01 ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭವಾಗಿರುವ ದಿನಾಂಕ 30-08-2024
02 ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ 07-09-2024
03 ತಾತ್ಕಾಲಿಕವಾಗಿ ಮೆರಿಟ್ ಪಟ್ಟಿ ಪ್ರಕಟಣೆ ಮಾಡುವ  ದಿನಾಂಕ 08-09-2024
04 ಈಗಾಗಲೆ ಈ ವರ್ಷ  ಸಲ್ಲಿಸಿರುವ ಅರ್ಜಿಯಲ್ಲಿ ಲೋಪದೋಷಗಳಾಗಿದ್ದರೆ ಅವುಗಳನ್ನು ಸರಿಪಡಿಸಿ ತಿದ್ದುಪಡೆ ಮಾಡಲು ಅವಕಾಶ ಕೊಟ್ಟ ದಿನಾಂಕ 9th and 10th Sept 2024
05 ಕಾರ್ಯಭಾರ ಪ್ರಕಟಿಸುವ ದಿನಾಂಕ 11-09-2024
06 ಮೆರಿಟ್ ಪಟ್ಟಿಗೆ ಅನುಗುಣವಾಗಿ ಕಾಲೇಜುಗಳನ್ನು ಆಯ್ಕೆಮಾಡಿಕೊಳ್ಳಲು ಕೌನ್ಸಿಲಿಂಗ್ ನಡೆಸುವ ದಿನಾಂಕಗಳು 17-09-2024

ಅರ್ಹತೆ :

ಕ್ರ. ಸಂ ವಿದ್ಯಾರ್ಹತೆ ಅಂಕಗಳು
01 ಸ್ನಾತಕೋತ್ತರ ಪದವಿಯಲ್ಲಿಅಭ್ಯರ್ಥಿಯು ಎರಡು ವರ್ಷದಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ 25%ನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. 25
02 ಹೆಚ್ಚುವರಿ ವಿದ್ಯಾರ್ಹತೆ : 
1) ಪಿಹೆಚ್.ಡಿ ವಿದ್ಯಾರ್ಹತೆಯನ್ನು ಪಡೆದಿದ್ದರೆ 12
2) ಎನ್‌ಇಟಿ/ಕೆ-ಸೆಟ್/ಎಸ್ಎಲ್‌ಇಟಿ ಇವುಗಳಲ್ಲಿ ಅರ್ಹತೆಯನ್ನು ಹೊಂದಿದ್ದರೆ 09
3) ಎಂ.ಫಿಲ್. ವಿದ್ಯಾರ್ಹತೆಯನ್ನು ಪಡೆದಿದ್ದರೆ 06
03 ಅನುಭವ:
ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ಗರಿಷ್ಠ 16 ವರ್ಷಗಳಿಗೆ 48 ಅಂಕಗಳು 48
ಒಟ್ಟು 100
ಅರ್ಹರಾಗಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುವುದೆಂದು ತಿಳಿಸಿದ್ದಾರೆ.

 

ವಿದ್ಯಾರ್ಹತೆ/ಸೇವಾ ಅವಧಿಗೆ ಅನುಗುಣವಾಗಿ ಗೌರವ ಧನವನ್ನು ನಿಯಮಾನುಸಾರ ಪರಿಗಣಿಸಲಾಗುವುದು

ಕ್ರ. ಸಂ

ಸೇವಾವಧಿ ಮತ್ತು ವಿದ್ಯಾರ್ಹತೆ

ಗೌರವ ಧನ
01 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 35,000/-
02 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31,000/-
03 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 38,000/-
04 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 34,000/-
05 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 39,000/-
06 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಹೊಂದಿಲ್ಲದವರಿಗೆ 35,000/-
07 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 40,000/-
08 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 36,000/-

 

   Apply Online:  ಅತಿಥಿ ಉಪನ್ಯಾಸಕರ ಸೇವೆಗೆ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
      Notification: ಅತಿಥಿ ಉಪನ್ಯಾಸಕರ ಸರಕಾರಿ ಪ್ರಕಟಣೆಗೆ ಕ್ಲಿಕ್ ಮಾಡಿ
Official Website: ಇಲಾಖಾ ಜಾಲತಾಣ

ಹೆಚ್ಚಿನ ಮಾಹಿತಿಗಾಗಿ  ಇಲಾಖಾ ಜಾಲತಾಣ ಕ್ಕೆ https://dce.karnataka.gov.in/  ಸಂಪರ್ಕಿಸಿ.

---Advertisement---

Related Post

Leave a Comment

error: Don't Copy this Content is protected !!